ADVERTISEMENT

ಮಳವಳ್ಳಿ: ಸಂವಿಧಾನದಿಂದ ಎಲ್ಲರಿಗೂ ಸಮಾನತೆ–ಶಾಸಕ ಪಿ.ಎಂ.ನರೇಂದ್ರಸ್ವಾಮಿ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 5:12 IST
Last Updated 27 ನವೆಂಬರ್ 2025, 5:12 IST
ಮಳವಳ್ಳಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆಯನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿದರು 
ಮಳವಳ್ಳಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆಯನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಿದರು    

ಮಳವಳ್ಳಿ: ಆಡಳಿತ ವಿಚಾರ, ಯಾವ ಕಾನೂನು ಇರಬೇಕು, ಹೇಗೆ ಬದುಕಬೇಕು, ಬದುಕಿಗೆ ಸಂವಿಧಾನ ಹೇಗೆ ಇರಬೇಕು ಎಂಬುವುದನ್ನು ಅರ್ಥಪೂರ್ಣವಾಗಿ ಕೊಟ್ಟ ಗೌರವ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ತಾಲ್ಲೂಕು ಆಡಳಿತದ ಆಯೋಜಿಸಿದ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಜಾತಿ, ಧರ್ಮ ಮತ್ತು ಲಿಂಗಭೇದವಿಲ್ಲದೇ ಎಲ್ಲರಿಗೂ ಒಂದೇ ಮತ ಎಂಬುವುದನ್ನು ಕೊಟ್ಟು ಜನರಿಂದಲೇ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ವಿಧಾನವನ್ನು ಜಾರಿ ಮಾಡಿ ಸಮಾನತೆ ಕಲ್ಪಿಸಿದ್ದಾರೆ ಎಂದು ಹೇಳಿದರು.
 
ಸಾಹಿತಿ ಪ್ರೊ.ರಂಗಸ್ವಾಮಿ ಮಾತನಾಡಿ, ‘ಸಂವಿಧಾನದಲ್ಲಿರುವ ವಿಷಯಗಳನ್ನು ಪ್ರತಿಯೊಬ್ಬರು ಓದಿ ಅರ್ಥಮಾಡಿಕೊಳ್ಳಬೇಕಿದೆ. ಹುಟ್ಟಿನಿಂದ ಸಾಯುವವರೆಗೂ ಸಂವಿಧಾನದಲ್ಲಿಯೇ ಬದುಕಬೇಕಾಗಿರುವುದರಿಂದ ಸಂವಿಧಾನದ ಅರಿವು ಮುಖ್ಯವಾಗಿದೆ’ ಎಂದು ಹೇಳಿದರು.

ADVERTISEMENT

ತಹಶೀಲ್ದಾರ್ ಎಸ್.ವಿ.ಲೊಕೇಶ್, ತಾ.ಪಂ.ಇಒ ಎಚ್.ಜಿ.ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಪಿ.ಮಾದೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಮುಖಂಡರಾದ ಪುಟ್ಟಸ್ವಾಮಿ, ಸಂತೋಷ್, ಕಸಾಪ ಎಲ್.ಚೇತನ್‌ಕುಮಾರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.