ADVERTISEMENT

ವಚನ ಸಾಹಿತ್ಯಕ್ಕೆ ಹಳಕಟ್ಟಿ ಕೊಡುಗೆ ಅಪಾರ: ಬಿ.ವಿ. ನಂದೀಶ್

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 14:14 IST
Last Updated 2 ಜುಲೈ 2025, 14:14 IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಫ.ಗು. ಹಳಕಟ್ಟಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್ ಮತ್ತು ಇತರರು ಪುಷ್ಪ ನಮನ ಸಲ್ಲಿಸಿದರು 
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಫ.ಗು. ಹಳಕಟ್ಟಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್ ಮತ್ತು ಇತರರು ಪುಷ್ಪ ನಮನ ಸಲ್ಲಿಸಿದರು    

ಮಂಡ್ಯ: ‘ಫ.ಗು. ಹಳಕಟ್ಟಿ ಅವರು ತಮ್ಮ ಭಾಷಾಂತರದ ಮೂಲಕ ಕರ್ನಾಟಕದ ವಚನ ಸಾಹಿತ್ಯವನ್ನು ಇಡೀ ಜಗತ್ತಿಗೆ ಪಸರಿಸಿದ ಮಹಾನ್ ಬರಹಗಾರ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್ ಬಣ್ಣಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಫ.ಗು. ಹಳಕಟ್ಟಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಹಳಕಟ್ಟಿ ಅವರ 145ನೇ ಜನ್ಮ ದಿನಾಚರಣೆ ಆಚರಿಸುತ್ತಿದ್ದು, ಕನ್ನಡದ ವಚನ, ಸಾಹಿತ್ಯ ಹಾಗೂ ಭಾಷಾಂತರಕ್ಕೆ ಅವರು ನೀಡಿರುವ ಕೊಡುಗೆ ನಿಜಕ್ಕೂ ಅಪಾರ ಎಂದು ಹೇಳಿದರು.

ADVERTISEMENT

ಫ.ಗು. ಹಳಕಟ್ಟಿ ಅವರ ಜೀವನ ಸಂದೇಶ, ತತ್ವ ಹಾಗೂ ಆದರ್ಶಗಳ ಬಗ್ಗೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ತಿಳಿಸಬೇಕೆಂಬ ಉದ್ದೇಶದಿಂದ ಜಿಲ್ಲೆಯ ವಿವಿಧ ಶಾಲಾ- ಕಾಲೇಜುಗಳಲ್ಲಿ ಫ.ಗು. ಹಳಕಟ್ಟಿ ಅವರ ಜಯಂತಿ ಆಚರಣೆಗೆ ಕರೆ ನೀಡಿದ್ದೇವೆ ಎಂದರು.

ಸಮುದಾಯ ಮುಖಂಡರಾದ ರಾಜಣ್ಣ ಎಂ.ಎಸ್, ದೇವರಾಜು, ಆನಂದ್, ಸುಧಾ, ಚೇತನ್ ಹಾಗೂ ರಾಜಕುಮಾರ್ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.