ADVERTISEMENT

ತಿಮ್ಮಕ್ಕ ನಿಧನ: ಸರ್ಕಾರಿ ರಜೆ ಕುರಿತು ಹರಿದಾಡಿದ ನಕಲಿ ಅಧಿಸೂಚನೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2025, 16:31 IST
Last Updated 14 ನವೆಂಬರ್ 2025, 16:31 IST
   

ಮಂಡ್ಯ: ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಾಟ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ ಸರ್ಕಾರದ ಅಧಿಸೂಚನೆ ದಿನಾಂಕ: 14.11.2025ರಂದು ಸಾಲುಮರದ ತಿಮ್ಮಕ್ಕರವರು ನಿಧನರಾದ ಹಿನ್ನೆಲೆಯಲ್ಲಿ ಇವರ ಅಂತ್ಯಕ್ರಿಯೆಯನ್ನು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಎಂದು ತಿಳಿಸಿರುವ ಅಧಿಸೂಚನೆಯೂ ನೈಜತೆಯಿಂದ ಕೂಡಿರುವುದಿಲ್ಲ ಹಾಗೂ ಇದು ನಕಲಿ ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಕುಮಾರ ಸ್ಪಷ್ಟಪಡಿಸಿದ್ದಾರೆ. 

ನಕಲಿ ಅಧಿಸೂಚನೆಯಲ್ಲಿ ರಾಜ್ಯದಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳಿಗೆ ಹಾಗೂ ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಎಂದು ಘೋಷಿಸಿರುವುದು ಕೂಡ ನಕಲಿ ಆಗಿರುತ್ತದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT