ADVERTISEMENT

ಮಂಡ್ಯ | ವಿದ್ಯುತ್ ಸ್ಪರ್ಶಿಸಿ ರೈತ ಸಾವು

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 2:56 IST
Last Updated 4 ನವೆಂಬರ್ 2025, 2:56 IST
   

ಹಲಗೂರು: ಜಮೀನಿನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ರೈತ ಸ್ಥಳದಲ್ಲೇ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಸಾಗ್ಯ ಗ್ರಾಮದ ರಮೇಶ್ (38) ಮೃತ ರೈತ.

ಮಂಗಳವಾರ ಬೆಳಿಗ್ಗೆ ಎಂದಿನಂತೆ ತಮ್ಮ ಜಮೀನಿಗೆ ತೆರಳಿದ್ದ ರಮೇಶ್, ತೆಂಗಿನ ಗರಿಗಳನ್ನು ಜಮೀನಿನಿಂದ ಹೊರ ಹಾಕುವ ಕೆಲಸ ಮಾಡುತ್ತಿದ್ದರು.

ADVERTISEMENT

ಈ ಸಂದರ್ಭದಲ್ಲಿ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಗಳಿಗೆ ತೆಂಗಿನ ಗರಿ ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.