
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿ ಬೆಳತೂರು ಗ್ರಾಮದ ರೈತರೊಬ್ಬರು ಸಾಲದ ಹೊರೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಭಾನುವಾರ ಮೃತಪಟ್ಟಿದ್ದಾರೆ.
ಕೃಷ್ಣೇಗೌಡ (47) ಮೃತ ರೈತ. ಗ್ರಾಮದಲ್ಲಿ ಎರಡು ಎಕರೆ ಜಮೀನಿನಲ್ಲಿ ಕೃಷಿ ಚಟುವಟಿಕೆಗೆ ಬ್ಯಾಂಕ್ ಮತ್ತು ಕೆಲ ಸಂಘ ಸಂಸ್ಥೆಗಳಲ್ಲಿ ಸುಮಾರು ₹4 ಲಕ್ಷ ಸಾಲ ಮಾಡಿದ್ದರು. ಸಾಲ ಮರುಪಾವತಿಸಲು ಒತ್ತಡ ಹೆಚ್ಚಾಗಿದ್ದರಿಂದ ಕೃಷ್ಣೇಗೌಡ ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.