ಮಳವಳ್ಳಿ: ತಾಲ್ಲೂಕಿನ ಕಿರುಗಾವಲು ಹೋಬಳಿಯ ದೇವಿಪುರ ಗ್ರಾಮದ ದಿವಂಗತ ಚನ್ನಣ್ಣನ ಚೌಡಯ್ಯ ಅವರ ಪತ್ನಿ, ರೈತ ಮಹಿಳೆ ಜವನಮ್ಮ(75) ಸಾಲದ ಹೊರೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದಲ್ಲಿ 3 ಎಕರೆ ಜಮೀನು ಹೊಂದಿದ್ದ ಜವನಮ್ಮ ವ್ಯವಸಾಯಕ್ಕಾಗಿ ಸಹಕಾರ ಸಂಘ, ಮಹಿಳಾ ಸ್ವಸಹಾಯ ಸಂಘ, ಖಾಸಗಿ ಬ್ಯಾಂಕ್, ಕೈಸಾಲ ಸೇರಿ ಸುಮಾರು ₹9 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲದ ಹೊರೆ ತಾಳದೇ ಗುರುವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ಶವ ಒಪ್ಪಿಸಲಾಯಿತು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.