ADVERTISEMENT

ಮಂಡ್ಯ | ಹೆಣ್ಣುಭ್ರೂಣ ಹತ್ಯೆ: ತನಿಖಾ ತಂಡ ರಚನೆ

10 ದಿನಗಳೊಳಗೆ ವರದಿ ಸಲ್ಲಿಸಲು ಆದೇಶ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 2:23 IST
Last Updated 20 ಆಗಸ್ಟ್ 2025, 2:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಂಡ್ಯ: ಜಿಲ್ಲೆಯ ಹೆಣ್ಣು ಭ್ರೂಣ ಲಿಂಗಪತ್ತೆ ಮತ್ತು ಹತ್ಯೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ನೌಕರರ ಕರ್ತವ್ಯ ಲೋಪದ ಕುರಿತು ವರದಿ ಸಲ್ಲಿಸಲು ತನಿಖಾ ತಂಡವನ್ನು ರಚಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪವಿತ್ರಾ ಆದೇಶಿಸಿದ್ದಾರೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ನಿರ್ದೇಶಕರು, ಮಂಡ್ಯದ ಹೆಚ್ಚುವರಿ ಜಿಲ್ಲಾಧಿಕಾರಿ, ಬೆಂಗಳೂರು ಕೇಂದ್ರ ಕಚೇರಿಯ ಉಪ ಔಷಧ ನಿಯಂತ್ರಕರು ಮತ್ತು ಆರೋಗ್ಯ ಇಲಾಖೆಯ ಉಪನಿರ್ದೇಶಕರ ತಂಡವನ್ನು ರಚಿಸಲಾಗಿದೆ. ಮಂಡ್ಯ ಜಿಲ್ಲೆಯ ಲೋಕಾಯುಕ್ತ ಡಿವೈಎಸ್ಪಿ ವರದಿಯಲ್ಲಿನ ಅಂಶಗಳ ಕುರಿತು ತನಿಖಾ ತಂಡವು 10 ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. 

ಹೆಣ್ಣು ಭ್ರೂಣ ಲಿಂಗಪತ್ತೆ ಮತ್ತು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ‘ಸುಮೊಟೊ’ ಪ್ರಕರಣ ದಾಖಲಾಗಿತ್ತು. ಈ ಆದೇಶದಲ್ಲಿ ಹೆಣ್ಣುಭ್ರೂಣ ಲಿಂಗಪತ್ತೆ ಮತ್ತು ಹತ್ಯೆ ತಡೆಗಟ್ಟುವಲ್ಲಿ ಹಾಗೂ ಲಿಂಗಾನುಪಾತವನ್ನು ತಪ್ಪಿಸುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಆಯುಷ್‌, ಔಷಧ ನಿಯಂತ್ರಣ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಅಧಿಕಾರಿ ಮತ್ತು ನೌಕರರು ವಿಫಲರಾಗಿದ್ದಾರೆ. ದುರಾಡಳಿತ ಮತ್ತು ಕರ್ತವ್ಯಲೋಪ ಎಸಗಿದ್ದಾರೆ ಎಂದು ಪ್ರಸ್ತಾಪಿಸಲಾಗಿತ್ತು. 

ADVERTISEMENT

ಮಂಡ್ಯ ಉಪವಿಭಾಗಾಧಿಕಾರಿ ಅವರು ಪ್ರಕರಣದಲ್ಲಿ ಪಕ್ಷಗಾರರಾಗಿರುವುದರಿಂದ ಪ್ರಕರಣದ ಕುರಿತು ವರದಿ ಸಲ್ಲಿಸಲು ಸೂಕ್ತವಾಗಿರುವುದಿಲ್ಲ. ಹೀಗಾಗಿ ತನಿಖಾ ತಂಡ ರಚಿಸಲಾಗಿದೆ ಎಂದು ತಿಳಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.