
ಪ್ರಜಾವಾಣಿ ವಾರ್ತೆ
ಮೇಲುಕೋಟೆ (ಮಂಡ್ಯ ಜಿಲ್ಲೆ): ತಾಲ್ಲೂಕಿನಲ್ಲಿ ಇತ್ತೀಚಿಗೆ ನಡೆದ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೇಮಂಗಲ ಗ್ರಾಮದ ಆಶಾ ಶಿವರಾಜ್ (50) ಎಂಬುವವರನ್ನು ಪೊಲೀಸರು ಇತ್ತೀಚೆಗೆ ಬಾಳೆಹೊನ್ನೂರಿನಲ್ಲಿ ಬಂಧಿಸಿದ್ದಾರೆ.
ಆರೋಪಿಯು ಗರ್ಭಪಾತಕ್ಕೆ ಸಂಬಂಧಿಸಿದ ಮಾತ್ರೆಗಳನ್ನು ಪೂರೈಸುತ್ತಿದ್ದರು ಎಂದು ಆರೋಪಿಸಲಾಗಿದೆ.
ಮೇ 30ರಂದು ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಹಳ್ಳಿಯ ರವಿಕುಮಾರ್ ಅವರ ಪತ್ನಿ ಮಾಲಾಶ್ರೀ ತೀವ್ರ ರಕ್ತಸ್ರಾವದಿಂದ ಪಟ್ಟಣದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ, ಪ್ರಕರಣ ಬೆಳಕಿಗೆ ಬಂದಿತ್ತು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಬೆಟ್ಟಸ್ವಾಮಿ ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.