ADVERTISEMENT

ಅಂಬರೀಷ್‌ ವಿರುದ್ಧ ಮಾತನಾಡಿದರೆ ಹೋರಾಟ: ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 13:04 IST
Last Updated 9 ಜುಲೈ 2021, 13:04 IST
ಅಂಬರೀಷ್‌
ಅಂಬರೀಷ್‌   

ಶ್ರೀರಂಗಪಟ್ಟಣ: ಕಲ್ಲು ಗಣಿಗಾರಿಕೆ ವಿಷಯದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಅನವಶ್ಯಕವಾಗಿ ದಿ.ಅಂಬರೀಷ್‌ ಅವರ ಹೆಸರು ಎಳೆದು ತಂದಿದ್ದಾರೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಅಂಬರೀಷ್‌ ಅಭಿಮಾನಿಗಳ ಸಂಘದ ಸದಸ್ಯರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೇಲೂರು ಸೋಮಶೇಖರ್‌ ಮಾತನಾಡಿ ‘ಹಂಗರಹಳ್ಳಿ ಜೀತ ಪ್ರಕರಣ ನಡೆದಾಗ ರವೀಂದ್ರ ಶ್ರೀಕಂಠಯ್ಯ ಅವರ ತಾಯಿ ಪಾರ್ವತಮ್ಮ ಅವರೇ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕಿಯಾಗಿದ್ದರು. ಶಾಸಕರು ಅದನ್ನು ನೆನಪು ಮಾಡಿಕೊಳ್ಳಬೇಕು. ಇನ್ನುಮುಂದೆ ಅಂಬರೀಷ್‌ ಅವರ ಬಗ್ಗೆ ಮಾತನಾಡಿದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಅಂಬರೀಷ್‌ ಅವರು ಬದುಕಿದ್ದಾಗಲೇ ಶಾಸಕರು ಮಾತನಾಡಬೇಕಾಗಿತ್ತು. ಅಕ್ರಮ ಗಣಿಗಾರಿಕೆಯನ್ನು ರಕ್ಷಣೆ ಮಾಡಿಕೊಳ್ಳಲು ಅಂಬರೀಷ್‌ ಅವರನ್ನು ಎಳೆದು ತಂದರೆ ಸುಮ್ಮನಿರುವುದಿಲ್ಲ. ಜಿಲ್ಲೆಯಲ್ಲಿ, ರಾಜ್ಯದಲ್ಲಿ ಅಂಬರೀಷ್‌ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಅವರ ವಿರುದ್ಧ ಮಾತನಾಡಿದರೆ ಅಭಿಮಾನಿಗಳ ಪ್ರತಿಭಟನೆ ಎದುರಿಸಬೇಕಾಗುತ್ತದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.