ADVERTISEMENT

ಮಾದೇಗೌಡ, ಪುಟ್ಟರಾಜುವಿರುದ್ಧ ಎಫ್ಐಆರ್

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 20:06 IST
Last Updated 9 ಏಪ್ರಿಲ್ 2019, 20:06 IST

ಮಂಡ್ಯ: ಮೊಬೈಲ್‌ನಲ್ಲಿ ಹಣದ ಕುರಿತು ಸಂಭಾಷಣೆ ನಡೆಸಿದ ಕಾಂಗ್ರೆಸ್‌ನ ಹಿರಿಯ ಮುಖಂಡ ಜಿ.ಮಾದೇಗೌಡ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಾದೇಗೌಡರು ಪುಟ್ಟರಾಜು ಅವರಿಗೆ ಕರೆ ಮಾಡಿ ಚುನಾವಣೆ ಖರ್ಚಿಗೆ ಹಣ ನೀಡುವಂತೆ ಒತ್ತಾಯಿಸಿದ್ದರು. ಪುಟ್ಟರಾಜು ಹಣ ನೀಡುವುದಾಗಿ ಒಪ್ಪಿಕೊಂಡಿದ್ದರು. ಇಬ್ಬರ ನಡುವಿನ ಸಂಭಾಷಣೆ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ನಂತರ ಮಾದೇಗೌಡರು ಆಡಿಯೊ ತನ್ನದೇ ಎಂದು ಒಪ್ಪಿಕೊಂಡಿದ್ದರು. ಪ್ರಚಾರ ನಡೆಸುವ ಹುಡುಗರಿಗೆ ನೀಡಲು ಹಣ ಕೇಳಿದ್ದೆ. ಇದರಲ್ಲಿ ತಪ್ಪು ಕಾಣಿಸುತ್ತಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಇದರ ವಿರುದ್ಧ ಚುನಾವಣಾಧಿಕಾರಿ ಜಗದೀಶ್ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಪೊಲೀಸರು ಐಪಿಸಿ ಕಲಂ 171 ಇ ಅಡಿ ಎಫ್ಐಆರ್ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT