ADVERTISEMENT

ನಾಲ್ವರು ಮಕ್ಕಳು, ಮಹಿಳೆಯ ಬರ್ಬರ ಹತ್ಯೆ: ಕಾರಣ ನಿಗೂಢ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2022, 9:38 IST
Last Updated 6 ಫೆಬ್ರುವರಿ 2022, 9:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆ ಆರ್ ಎಸ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರನ್ನು‌ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಗ್ರಾಮದ ಬಜಾರ್ ಲೈನ್ ಬಡಾವಣೆಯ ಗಂಗಾರಾಂ ಅವರ ಪತ್ನಿ ಲಕ್ಷ್ಮಿ (30), ಅವರ ಮಕ್ಕಳಾದ ರಾಜು (10), ಕೋಮಲ್ (7), ಕುನಾಲ್ (4) ಮತ್ತು ಲಕ್ಷ್ಮಿ ಅವರ ಸೋದರ ಗಣೇಶ್ ಅವರ ಮಗ ಗೋವಿಂದ (8) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಈ ಸಾಮೂಹಿಕ ಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ. ಲಕ್ಷ್ಮಿ ಅವರ ಪತಿ ಗಂಗಾರಾಂ ವ್ಯಾಪಾರ ನಿಮಿತ್ತ ಹೊರ ಹೋಗಿದ್ದಾಗ ಈ ಕೃತ್ಯ ನಡೆದಿದೆ.

ADVERTISEMENT

ಸ್ಥಳಕ್ಕೆ ದಕ್ಷಿಣ‌ ವಲಯ ಐ.ಜಿ ಪ್ರವೀಣ್ ಮಧುಕರ್‌ ಪವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಪರಿಶೀಲನೆ‌ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಯಿತು.

'ಘಟನೆಗೆ ಕಾರಣ ಇನ್ನೂ ನಿಗೂಢವಾಗಿದೆ. ಮೃತದೇಹಗಳ ಮೇಲೆ ಗಾಯಗಳಾಗಿರುವ ಕಾರಣ ಕೊಲೆ ಎಂದು ಶಂಕಿಸಲಾಗಿದೆ. ಎಲ್ಲಾ ದಿಕ್ಕುಗಳಿಂದಲೂ ತನಿಖೆ ಮಾಡಲಾಗುತ್ತಿದೆ' ಎಂದು ಎಸ್ಪಿ ಎನ್.ಯತೀಶ್ ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.