ADVERTISEMENT

ಮಳವಳ್ಳಿ | ಕಲುಷಿತ ಆಹಾರ ಪ್ರಕರಣ: ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ ರದ್ದು

​ಪ್ರಜಾವಾಣಿ ವಾರ್ತೆ
Published 10 ಮೇ 2025, 4:56 IST
Last Updated 10 ಮೇ 2025, 4:56 IST

ಮಳವಳ್ಳಿ (ಮಂಡ್ಯ): ಕಲುಷಿತ ಆಹಾರ ಸೇವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ, ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮೂರು ಶಾಲೆಗಳ ಮಾನ್ಯತೆಯನ್ನು ಡಿಡಿಪಿಐ ಎಚ್. ಶಿವರಾಮೇಗೌಡ ರದ್ದುಪಡಿಸಿದ್ದಾರೆ.

ಮಾ.16ರಂದು ಉದ್ಯಮಿಯೊಬ್ಬರು ನೀಡಿದ್ದ ಆಹಾರ ಸೇವಿಸಿ ಮೇಘಾಲಯ ಮೂಲದ ವಿದ್ಯಾರ್ಥಿಗಳಾದ ಕೇರ್ಲಾಂಗ್ (13) ಮತ್ತು ನಮೀಬ್ ಮಾಂತೆ (14) ಮೃತಪಟ್ಟಿದ್ದರು. 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. 

‘ಶಿಕ್ಷಣ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಟಿ.ಕಾಗೇಪುರ ಹಾಗೂ ಕಿರುಗಾವಲು ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ ಹಿಂಪಡೆದು ಆ ಮೂರು ಶಾಲೆಗಳ ವಿದ್ಯಾರ್ಥಿಗಳಿಗೆ ಪರ್ಯಾಯ ದಾಖಲಾತಿ ವ್ಯವಸ್ಥೆ ಕಲ್ಪಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ. ಉಮಾ ಅವರಿಗೆ ಡಿಡಿಪಿಐ ಆದೇಶಿಸಿದ್ದಾರೆ.

ADVERTISEMENT

2024-25ನೇ ಸಾಲಿನಲ್ಲಿ ಕಿರುಗಾವಲು ಗೋಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 126, ಕನ್ನಡ ಮಾಧ್ಯಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 202 ಹಾಗೂ ಇಂಗ್ಲಿಷ್‌ ಮಾಧ್ಯಮದ ಗೋಕುಲ ಪಬ್ಲಿಕ್ ಶಾಲೆಯಲ್ಲಿ 15 ವಿದ್ಯಾರ್ಥಿಗಳು ದಾಖಲಾಗಿದ್ದರು.

‘ಮೇಘಾಲಯ ಮೂಲದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೇರೆ ಶಾಲೆಯ ಹೆಸರಿನಲ್ಲಿ ಅನಧಿಕೃತವಾಗಿ ಎಸ್ಎಸ್ಎಲ್‌ಸಿ ವರೆಗೆ ತರಗತಿ ನಡೆಸುತ್ತಿದ್ದರು’ ಎಂಬ ಆರೋಪ ಕೇಳಿಬಂದಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.