ADVERTISEMENT

ಆಹಾರ ಗುಣಮಟ್ಟ ಪರಿಶೀಲನೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 14:29 IST
Last Updated 16 ಏಪ್ರಿಲ್ 2025, 14:29 IST

ಮಂಡ್ಯ: ‘ಆಹಾರ ಗುಣಮಟ್ಟ ಮತ್ತು ಕುಡಿಯುವ ನೀರಿನ ಶುದ್ಧತೆ ಪರಿವೀಕ್ಷಣೆಗೆ ಪ್ರತಿ ತಾಲ್ಲೂಕಿನಲ್ಲಿ ಒಂದು ತಂಡ ರಚನೆ ಮಾಡಬೇಕು’ ಎಂದು ರೈತ ಸಂಘದ ಮುಖಂಡ ಕಿರಂಗೂರು ಪಾಪು ಒತ್ತಾಯಿಸಿದ್ದಾರೆ.

ಹೋಟೆಲ್, ಬೇಕರಿ, ಫಾಸ್ಟ್‌ಫುಡ್, ಬೀದಿಬದಿ ಕ್ಯಾಂಟೀನ್, ಐಸ್‌ಕ್ರೀಮ್ ಪಾರ್ಲರ್‌ಗಳಲ್ಲಿ ಸ್ವಚ್ಛತೆ ಮತ್ತು ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತಾ ಅಧಿಕಾರಿಗಳು ಪ್ರತಿ ತಾಲ್ಲೂಕಿನಲ್ಲಿ ಒಂದು ತಂಡ ರಚಸಿ ತಪಾಸಣೆ ಮಾಡಲು ಜಿಲ್ಲಾಧಿಕಾರಿಯವರು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲೂ ಆಹಾರ ಇಲಾಖೆಯ ಅಧಿಕಾರಿಗಳು ಇರುತ್ತಾರೆ. ಈ ಇಲಾಖಾಧಿಕಾರಿಗಳಿಂದ ಆಹಾರದ ಹಾಗೂ ಕುಡಿಯುವ ನೀರಿನ ಗುಣಮಟ್ಟದ ವರದಿ ತರಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.