ADVERTISEMENT

ಮಾಜಿ ಶಾಸಕಕೆ.ಕೆಂಪೇಗೌಡ ನಿಧನ

ನಿಧನ ವಾರ್ತೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 19:38 IST
Last Updated 8 ಸೆಪ್ಟೆಂಬರ್ 2022, 19:38 IST
ಕೆ.ಕೆಂಪೇಗೌಡ
ಕೆ.ಕೆಂಪೇಗೌಡ   

ಪಾಂಡವಪುರ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕೆ.ಕೆಂಪೇಗೌಡ (96) ಗುರುವಾರ ಬೆಳಿಗ್ಗೆ ಚಿನಕುರಳಿಯ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ ನಾಲ್ವರು ಪುತ್ರರು, ಐವರು ಪುತ್ರಿಯರಿದ್ದಾರೆ. ಅವರ ತೋಟದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು.

ಅವರು ಪಾಂಡವಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ 3 ಬಾರಿ ಶಾಸಕರಾಗಿದ್ದರು. ಮೊದಲ ಬಾರಿಗೆ 1983ರಲ್ಲಿ ಜನತಾ ಪಕ್ಷದಿಂದ ಆಯ್ಕೆಯಾಗಿದ್ದರು. 1985ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ, 1999ರಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. 2008ರಲ್ಲಿ ಮೇಲುಕೋಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡಿದ್ದರು. ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT