ADVERTISEMENT

ಭಾರತೀನಗರ: ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ತರಗತಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 12:32 IST
Last Updated 10 ಏಪ್ರಿಲ್ 2025, 12:32 IST
ಮಹದೇವಸ್ವಾಮಿ
ಮಹದೇವಸ್ವಾಮಿ   

ಭಾರತೀನಗರ: ‘ಇಲ್ಲಿಯ ಭಾರತೀ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಏ. 12ರಿಂದ ವಿಶೇಷ ತರಗತಿಗಳನ್ನು ಉಚಿತವಾಗಿ ನಡೆಸಲಾಗುವುದು’ ಎಂದು ಭಾರತಿ ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಎಸ್.ಮಹದೇವಸ್ವಾಮಿ ತಿಳಿಸಿದರು.

‘ಬಿಇಟಿ ಅಧ್ಯಕ್ಷ ಹಾಗೂ ಶಾಸಕ ಮಧು ಜಿ. ಮಾದೇಗೌಡರ ಸಲಹೆಯಂತೆ ಎಲ್ಲಾ ವಿಷಯಗಳಿಗೂ ವಿಶೇಷ ತರಗತಿ ಆಯೋಜಿಸಿ ಭಾರತೀ ಕಾಲೇಜಿನ ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಾಗುವುದು. ತರಗತಿಗಳಿಗೆ ಯಾವುದೇ ಕಾಲೇಜಿನ ವಿದ್ಯಾರ್ಥಿಗಳಿಗಾದರೂ ಪ್ರವೇಶಾವಕಾಶವಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಲಾ, ವಾಣಿಜ್ಯ ಮತ್ತು ವಿಜ್ಞಾನ, ಭಾಷಾ ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9148363090, 9731349743, 9538501016 ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದೆಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.