ಹಲಗೂರು: ಸಮೀಪದ ಬಸವನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಗ್ರಾಮ ಪಂಚಾಯಿತಿ ಸದಸ್ಯ ಶಶಿಕುಮಾರ್ ಮಾತನಾಡಿ, ‘ಗ್ರಾಮೀಣ ಜನರಿಗೆ ಆರೋಗ್ಯ ತಪಾಸಣಾ ಶಿಬಿರ ಸಹಕಾರಿಯಾಗಿದೆ’ ಎಂದು ತಿಳಿಸಿದರು.
ನೂರಕ್ಕೂ ಹೆಚ್ಚು ಮಂದಿ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ಮಾಡಿಸಿಕೊಂಡರು. ಡಾ.ನಾಗೇಶ್. ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಕೆ ಕುಮಾರ್, ಕಾರ್ಯದರ್ಶಿ ಡಿ.ಎಲ್. ಮಾದೇಗೌಡ, ಖಜಾಂಚಿ ಕೆ.ಶಿವರಾಜು, ಸದಸ್ಯರಾದ ಮನೋಹರ್, ಪ್ರವೀಣ್, ಲಯನ್ ಜಯಶಂಕರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.