ಮಂಡ್ಯ: ಜಿ.ಮಾದೇಗೌಡ ಅವರ 97ನೇ ವರ್ಷದ ಜನ್ಮದಿನದ ನೆನಪಿನಲ್ಲಿ ನೀಡುವ ಸಮಾಜ ಸೇವಾ ಪ್ರಶಸ್ತಿಗೆ ಬೆಂಗಳೂರು ಗೊಟ್ಟಿಗೆರೆ ರಾಮಕೃಷ್ಣ ಸಮಗ್ರ ಶಿಕ್ಷಣ ಕೇಂದ್ರದ ಅಧ್ಯಕ್ಷೆ ಸರೋಜಮ್ಮ ಎಂ.ಚಂದ್ರಶೇಖರ್ ಅವರನ್ನು ಮತ್ತು ಸಾವಯವ ಕೃಷಿಕ ಪ್ರಶಸ್ತಿಗೆ ಕುಣಿಗಲ್ ತಾಲ್ಲೂಕು ದೊಡ್ಡಹೊಸೂರು ಗಾಂಧೀಜಿ ಸಹಜ ಬೇಸಾಯ ಆಶ್ರಮ ಸಂಸ್ಥಾಪಕ ಎಚ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.
ಡಾ.ಜಿ.ಮಾದೇಗೌಡ ಪ್ರತಿಷ್ಠಾನ ಭಾರತಿ ಎಜುಕೇಶನ್ ಟ್ರಸ್ಟ್, ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್ ಸಹಯೋಗದಲ್ಲಿ ಜು.10ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ 25ನೇ ವರ್ಷದ ರಾಜ್ಯ ಮಟ್ಟದ ಡಾ.ಜಿ. ಮಾದೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಭಾರತಿ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ ಹೇಳಿದರು.
ಪುರಸ್ಕೃತರಿಗೆ ತಲಾ ₹25 ಸಾವಿರ ನಗದು, ಪ್ರಶಸ್ತಿ ಫಲಕ ನೀಡಿ ಅಭಿನಂದಿಸಲಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.
ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಪ್ರಶಸ್ತಿ ಪ್ರದಾನ ಮಾಡುವರು. ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧ್ಯಕ್ಷತೆ ವಹಿಸುವರು. ಶಾಸಕ ಪಿ.ರವಿಕುಮಾರ್, ಭಾರತಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಮಧು ಜಿ ಮಾದೇಗೌಡ ಆಗಮಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ಮಾದೇಗೌಡ ಅವರ ಅಭಿಮಾನಿಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.
ಟ್ರಸ್ಟ್‌ನ ಎಚ್.ಎಂ. ನಾಗೇಶ್, ಬಿ.ಕೆ.ಕೃಷ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.