ADVERTISEMENT

ಹಲಗೂರು: ಜೂಜಾಟ ಆಡಿದ 16 ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 7:48 IST
Last Updated 26 ಫೆಬ್ರುವರಿ 2026, 7:48 IST
<div class="paragraphs"><p>ಬಂಧನ</p></div>

ಬಂಧನ

   

ಹಲಗೂರು: ವಿವಿಧ ಕಡೆ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಳೆ 16 ಮಂದಿಯನ್ನು ಹಲಗೂರು ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹30 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಹಲಗೂರು ಸಮೀಪದ ಚಿಕ್ಕ ಎಲಚಗೆರೆ ಗ್ರಾಮದ ಹೊರವಲಯದಲ್ಲಿ 9 ಮಂದಿಯನ್ನು ಬಂಧಿಸಿದ್ದು, ₹13 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ಸಮೀಪದ ಹುಚ್ಚೇಗೌಡನದೊಡ್ಡಿ ಆಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ 7 ಮಂದಿ ಜೂಜುಕೋರರನ್ನು ಬಂಧಿಸಿದ್ದು, ಆರೋಪಿಗಳಿಂದ ₹17 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಮಂಗಳವಾರ ರಾತ್ರಿ ಖಚಿತ ಮಾಹಿತಿ ಅಧರಿಸಿದ ಹಲಗೂರು ಪೊಲೀಸರು ಸರ್ಕಲ್ ಇನ್‌ಸ್ಪೆಕ್ಟರ್ ಬಿ.ಎಸ್.ಶ್ರೀಧರ್ ಮತ್ತು ಪಿಎಸ್ಐ ಲೋಕೇಶ್ ಪ್ರತ್ಯೇಕವಾಗಿ ದಾಳಿ ಮಾಡಿದ್ದು, ಜೂಜುಕೋರರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.