ADVERTISEMENT

ಜೂಜು: ನಾಲ್ಕು ಪ್ರಕರಣ ದಾಖಲು

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2025, 14:23 IST
Last Updated 31 ಮಾರ್ಚ್ 2025, 14:23 IST

ಮಂಡ್ಯ: ತಾಲ್ಲೂಕಿನ ವಿವಿಧೆಡೆ ಭಾನುವಾರ ಜೂಜು ಆಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಮಂಡ್ಯ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಸಾಹುಕಾರ್ ಚೆನ್ನಯ್ಯ ಬಡಾವಣೆಯಲ್ಲಿ ಜೂಜಾಡುತ್ತಿದ್ದ ಐವರ ವಿರುದ್ಧ ಪ್ರಕರಣ ದಾಖಲಿಸಿ ಅವರಿಂದ ₹3,500 ವಶಪಡಿಸಿಕೊಳ್ಳಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹನಿಯಂಬಾಡಿ ರಸ್ತೆ ಸಮೀಪ ದಾಳಿ ನಡೆಸಿ ₹6,550 ವಶಪಡಿಸಿಕೊಂಡು ಐವರ ವಿರುದ್ಧ ದೂರು ದಾಖಲಾಗಿದೆ.

ತಾಲ್ಲೂಕಿನ ಪುರ ಗ್ರಾಮದ ಜಮೀನೊಂದರಲ್ಲಿ ನಡೆಯುತಿದ್ದ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ₹11,250 ವಶಪಡಿಸಿಕೊಂಡು, ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಡ್ಯ ಸೆಂಟ್ರಲ್ ಠಾಣೆ ವ್ಯಾಪ್ತಿಯ ವಿವೇಕಾನಂದ ನಗರಕ್ಕೆ ಹೋಗುವ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಅವರಿಂದ ₹12,500 ವಶಕ್ಕೆ ಪಡೆದು, 13 ಜನರ ವಿರುದ್ಧ ದೂರು ದಾಖಲು ಮಾಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.