ADVERTISEMENT

ಗಾಂಧಿ ಪುರಸ್ಕಾರ: ಅರ್ಹವಲ್ಲದವರಿಗೆ ಆದ್ಯತೆ- ಆರೋಪ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2024, 15:53 IST
Last Updated 22 ಸೆಪ್ಟೆಂಬರ್ 2024, 15:53 IST
ಕೆಂಪಾಚಾರಿ
ಕೆಂಪಾಚಾರಿ   

ಮಂಡ್ಯ: 'ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ನೀಡುವ ಗಾಂಧಿ ಪುರಸ್ಕಾರ ಪ್ರಶಸ್ತಿಗೆ ಶಿಫಾರಸು ಮಾಡುವಲ್ಲಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ" ಎಂದು ಗೋಪಾಲಪುರ ಗ್ರಾ.ಪಂ ಉಪಾಧ್ಯಕ್ಷ ಕೆಂಪಾಚಾರಿ ಆರೋಪಿಸಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸರ್ಕಾರಕ್ಕೆ ಮಾರ್ಗಸೂಚಿ ಮಾಡಿದ್ದರೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಯಾರದ್ದೋ ಒತ್ತಡಕ್ಕೆ ಮಣಿದು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಪ್ರಶಸ್ತಿಗೆ ಅರ್ಹವಲ್ಲದ ಪಂಚಾಯಿತಿಗೆ ಹೆಚ್ಚು ಅಂಕ ನೀಡಿ ಶಿಫಾರಸು ಮಾಡುತ್ತಿದ್ದಾರೆ. ಇದರಿಂದಾಗಿ ನಮ್ಮದು ಸೇರಿದಂತೆ ಹಲವಾರು ಪಂಚಾಯಿತಿಗಳಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಜಿ.ಪಂ.ಸಿಇಓ ಶೇಖ್ ತನ್ವೀರ್ ಆಸೀಫ್ ಅವರಿಗೆ ಮನವಿ ನೀಡಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.