ಪಾಂಡವಪುರ: ರೈಲಿನಲ್ಲಿ ಗಾಂಜಾ ಸೇದುತ್ತಿದ್ದ ಮೂವರು ಯುವಕರನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದೆ.
ಈ ಮೂವರು ಯುವಕರು ಉತ್ತರ ಪ್ರದೇಶದವರು. ತಾಲ್ಲೂಕಿನ ಚಿಕ್ಕಬ್ಯಾಡರಹಳ್ಳಿ ಅಕ್ಕಪಕ್ಕದ ಆಲೆಮನೆಯಲ್ಲಿ ಕೂಲಿ ಕೆಲಸ ಮಾಡಲು ಬರುತ್ತಿದ್ದರು. ಬೆಂಗಳೂರಿನಿಂದ ಪಾಂಡವಪುರದ ಮೂಲಕ ಮೈಸೂರಿಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮೂವರು ಯುವಕರು ಗಾಂಜಾ ಸೇದುತ್ತಿದ್ದರು. ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪಾಂಡವಪುರ ತಾಲ್ಲೂಕಿನ ಹುಲ್ಕೆರೆ ಗ್ರಾಮದ ಮಹದೇವ ಅಲಿಯಾಸ್ ಅಪ್ಪುರಾವ್ ಮತ್ತು ಕೆಲ ಪ್ರಯಾಣಿಕರು ಈ ಮೂವರು ಯುವಕರನ್ನು ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವಕರನ್ನು ವಶಕ್ಕೆ ಪಡೆದಿರುವ ಪಾಂಡವಪುರ ರೈಲ್ವೆ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.