
ಪಾಂಡವಪುರ: ಗಾಂಜಾ ಮಾರಾಟ ಮಾಡುತ್ತಿದ್ದ ಗುಂಪಿನ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿ 10 ಕೆ.ಜಿ. 150 ಗ್ರಾಂ ಗಾಂಜಾ ವಶಪಡಿಸಿಕೊಂಡು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಿರೇಮರಳಿ ಗ್ರಾಮದ ಗೌತಮ್, ರಕ್ಷಿತ್, ಮದೇನಹಳ್ಳಿ ಮನೋಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಣದ ಹೊಸೂರು ಗ್ರಾಮದ ಮಧು ಪರಾರಿಯಾಗಿದ್ದಾನೆ. ಆರೋಪಿಗಳು ಒಡಿಶಾದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಬಿಟ್ಟನಾಯಕನಹಳ್ಳಿ ದಾಖಲೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಶ್ರೀರಂಗಪಟ್ಟಣ ಪಟ್ಟಣದ ಡಿವೈಎಸ್ಪಿ ಶಾಂತಮಲ್ಲಪ್ಪ, ಸರ್ಕಲ್ ಇನ್‌ಸ್ಪೆಕ್ಟರ್ ಶರತ್ ನೇತೃತ್ವದಲ್ಲಿ ದಾಳಿ ನಡೆಯಿತು.
ಬಂಧಿತ ಮೂವರು ಆರೋಪಿಗಳನ್ನು ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.