ಮಳವಳ್ಳಿ: ತಾಲ್ಲೂಕಿನ ನಿರುದ್ಯೋಗಗಳಿಗೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹಲವು ಕೈಗಾರಿಕೆಗಳನ್ನು ಹಂತ-ಹಂತವಾಗಿ ಸ್ಥಾಪಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ತಾಲ್ಲೂಕಿನ ಉಪ್ಪನಹಳ್ಳಿ (ಕನ್ನಹಳ್ಳಿ)ಯಲ್ಲಿ ಶಾಯಿ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್‌ನಿಂದ ನೂತನವಾಗಿ ನಿರ್ಮಿಸುತ್ತಿರುವ ಗಾರ್ಮೆಂಟ್ಸ್‌ಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಗಾರ್ಮೆಂಟ್ಸ್ ಆರಂಭದಿಂದ ಮಹಿಳೆಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿಗೆ ಅನುಕೂಲವಾಗಲಿದೆ. ಕ್ಷೇತ್ರದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೂ ಸಾಕಷ್ಟು ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು.
ಶಾಯಿ ಎಕ್ಸ್‌ಪೋರ್ಟ್‌ನ ಶುಭಾ ದೇವರಾಜೇ ಅರಸು ಮಾತನಾಡಿ, ‘ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಹೊರವಲಯದ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಗಾರ್ಮೆಂಟ್ಸ್ ಆರಂಭಿಸಲಾಗುತ್ತಿದೆ. ಉಪ್ಪನಹಳ್ಳಿಯಲ್ಲಿ ₹ 200 ಕೋಟಿ ವೆಚ್ಚದಲ್ಲಿ ಗಾರ್ಮೆಂಟ್ಸ್ ಆರಂಭಿಸಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು.
ವ್ಯವಸ್ಥಾಪಕ ಮರಿಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಲಿಂಗಯ್ಯ, ಮನ್‌ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಮಾಜಿ ಅಧ್ಯಕ್ಷ ಕೆ.ಜೆ. ದೇವರಾಜು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.