ಮಂಡ್ಯ: ‘ತೊಂದರೆ ನೀಡುವ ಫೈನಾನ್ಸ್ ಕಂಪನಿಗಳ ಕಡೆಗೆ ಹೋಗುವುದನ್ನು ಜನ ನಿಲ್ಲಿಸಬೇಕು. ಸರ್ಕಾರವೇ ಬಡ್ಡಿ ರಹಿತ ಸಾಲ ನೀಡುತ್ತಿದ್ದು, ಪಿಎಲ್‌ಡಿ ಬ್ಯಾಂಕ್, ಸೊಸೈಟಿ ಮೂಲಕ ತೆಗೆದುಕೊಳ್ಳಬಹುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
‘ಫೈನಾನ್ಸ್ ಕಂಪನಿಗಳ ಕಿರುಕುಳ ಸಂಬಂಧ ಕಠಿಣ ಕಾನೂನು ಕ್ರಮಕ್ಕೆ ಚಿಂತನೆ ನಡೆದಿದೆ. ಬಡ್ಡಿ, ಸುಸ್ತಿಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಮಂಡ್ಯದಲ್ಲೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ’ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.