ADVERTISEMENT

ಅಂಗನವಾಡಿ ಕಾರ್ಯಕರ್ತೆಗೆ ಖಾರದ ಪುಡಿ ಎರಚಿ 60 ಗ್ರಾಂ ತೂಕದ ಚಿನ್ನದ ಸರ ಕಳವು

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:28 IST
Last Updated 29 ಮೇ 2025, 14:28 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಂಡ್ಯ: ಅಂಗನವಾಡಿ ಕಾರ್ಯಕರ್ತೆ ಮುಖಕ್ಕೆ ಖಾರದ ಪುಡಿ ಎರಚಿ ಸುಮಾರು 60 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಗುರುವಾರ ಮುಸುಕುಧಾರಿಗಳು ಕಳ್ಳತನ ಮಾಡಿದ್ದಾರೆ.

ತಾಲ್ಲೂಕಿನ ಕೋಲ್‌ಕಾರನದೊಡ್ಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ನಿರ್ವಹಿಸುತ್ತಿರುವ ತಗ್ಗಹಳ್ಳಿ ಗ್ರಾಮದ ಮಮತಾ ಅವರು, ಕೆಲಸ ಮುಗಿಸುಕೊಂಡು ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ನಾಲ್ವರು ಮುಸುಕುಧಾರಿಗಳು ವಾಹನ ಅಡ್ಡಗಟ್ಟಿದ್ದಾರೆ. ಈ ವೇಳೆ ಬೆದರಿದ ಮಮತಾ ಅವರು ವಾಹವನ್ನು ತಕ್ಷಣವೇ ಹಿಂದಿರುಗಿಸಲು ಹೋದಾಗ ಆಯತಪ್ಪಿ ಕಳೆಗೆ ಬಿದ್ದಿದ್ದಾರೆ. ಈ ವೇಳೆ ಕೆಳೆಗೆ ಬಿದ್ದು ಪ್ರಜ್ಞೆ ತಪ್ಪಿದ ಮಮತಾ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ADVERTISEMENT

ನಂತರ ಸಾರ್ವಜನಿಕರು ಮಂಡ್ಯ ಮಿಮ್ಸ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.