
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಮಳವಳ್ಳಿ: ಪಟ್ಟಣದ ಕೋಟೆ ಬೀದಿಯ ಮನೆಯಲ್ಲಿ ಗುರುವಾರ ಕಳ್ಳರು ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಕೋಟೆ ಬೀದಿಯ ವಾಸಿ ಲತಾ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಗೆ ಬೀಗ ಹಾಕಿಕೊಂಡು ಕೀಯನ್ನು ಮನೆ ಮುಂಭಾಗದ ಗಿಡದ ಬಳಿ ಇಟ್ಟು ಗುರುವಾರ ಮಧ್ಯಾಹ್ನ ಪತಿಯೊಂದಿಗೆ ಶಿವರಾತ್ರೀಶ್ವರ ಶಿವಯೋಗಿ ಅವರ ಜಯಂತ್ಯುತ್ಸವಕ್ಕೆ ತೆರಳಿದ್ದರು. ಸಂಜೆ ವಾಪಾಸ್ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಕೀ ಬಳಸಿ ಬೀಗ ತೆಗೆದು ಒಳನುಗ್ಗಿರುವ ಕಳ್ಳರು ಬೀರುವಿನ ಲಾಕರ್ ಮುರಿದು ಸುಮಾರು 350 ಗ್ರಾಂ ಚಿನ್ನಾಭರಣ ಹಾಗೂ ₹80 ಸಾವಿರ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.