ADVERTISEMENT

ಸರ್ಕಾರಿ ಶಾಲೆಯಲ್ಲಿ ಓದಿದವರ ಸಾಧನೆ ದೊಡ್ಡದು: ಪ್ರಾಂಶುಪಾಲ ವೆಂಕಟೇಶ್

ಅಣ್ಣೂರು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 6:13 IST
Last Updated 10 ಫೆಬ್ರುವರಿ 2026, 6:13 IST
ಭಾರತೀನಗರ ಸಮೀಪದ ಅಣ್ಣೂರು ಸರ್ಕಾರಿ ಪದವಿ ಪೂರ್ವಕಾಲೇಜು ಆಯೋಜಿಸಿದ್ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯಶಿಕ್ಷಕ ಸಿದ್ದೇಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು
ಭಾರತೀನಗರ ಸಮೀಪದ ಅಣ್ಣೂರು ಸರ್ಕಾರಿ ಪದವಿ ಪೂರ್ವಕಾಲೇಜು ಆಯೋಜಿಸಿದ್ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯಶಿಕ್ಷಕ ಸಿದ್ದೇಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು   

ಭಾರತೀನಗರ: ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಿದ್ದಾರೆ. ಬಹುತೇಕ ಮಕ್ಕಳು ದೇಶ ಸೇವೆಯಲ್ಲಿ ನಿರತರಾಗಿದ್ದಾರೆ ಎಂದು ಪ್ರಾಂಶುಪಾಲ ವೆಂಕಟೇಶ್ ತಿಳಿಸಿದರು.

ಸಮೀಪದ ಅಣ್ಣೂರು ಸರ್ಕಾರಿ ಪದವಿ ಪೂರ್ವಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ವಿದ್ಯಾರ್ಜನೆ ಎಷ್ಟು ಮುಖ್ಯವೋ ಸಂಸ್ಕಾರವೂ ಅಷ್ಟೇ ಮುಖ್ಯ. ಕಲಿತಂತೆಲ್ಲ ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಯಲ್ಲಿ ತೊಡಗಬೇಕು. ಗುರು, ಹಿರಿಯರಿಗೆ ಗೌರವ ನೀಡುವ ಗುಣ ಬೆಳೆಸಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿದ್ಯಾರ್ಜನೆಯ ಜೊತೆಗೆ ಸಾಮಾಜಿಕ ತಿಳಿವಳಿಕೆಗಳನ್ನು ನೀಡಲಾಗುತ್ತಿದ್ದು, ಪೋಷಕರೂ ಮಕ್ಕಳ ಮೇಲೆ ನಿಗಾ ವಹಿಸಿ ಶಾಲೆಗಳಲ್ಲಿ ಕಲಿತದ್ದು ವ್ಯರ್ಥವಾಗದಂತೆ ನೋಡಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.

ADVERTISEMENT

ಪ್ರೌಢಶಾಲಾ ಮುಖ್ಯಶಿಕ್ಷಕ ಸಿದ್ದೇಗೌಡ ಮಾತನಾಡಿದರು. ಪ್ರಥಮ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಾಣಿಜ್ಯಶಾಸ್ತ್ರ ವಿಭಾಗದ ಬಿ.ಎಂ.ಶಿವಮೂರ್ತಿ, ಕಲಾವಿಭಾಗದ ಮಮತ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗಳಾದ ದೇವಿಕಾ, ವರ್ಷ ಅವರಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಆಂಗ್ಲಭಾಷಾ ಉಪನ್ಯಾಸಕ ಪ್ರವೀಣ್, ಅರ್ಥಶಾಸ್ತ್ರ ಉಪನ್ಯಾಸಕ ದೊಡ್ಡಯ್ಯ, ಇತಿಹಾಸ ಉಪನ್ಯಾಸಕ ಅಭಿಷೇಕ್, ಸಮಾಜವಿಜ್ಞಾನ ಉಪನ್ಯಾಸಕ ಪ್ರವೀಣ್, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ದಿವ್ಯ, ರಾಜ್ಯಶಾಸ್ತ್ರ ಉಪನ್ಯಾಸಕಿ ಪವಿತ್ರ ಸೇರಿ ಪ್ರೌಢಶಾಲಾ ಸಹಶಿಕ್ಷಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.