ADVERTISEMENT

ಗ್ರಾ.ಪಂ ಚುನಾವಣೆಯೇ ದಿಕ್ಸೂಚಿ: ಸಚಿವ ಆರ್.ಅಶೋಕ್

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 14:31 IST
Last Updated 3 ಡಿಸೆಂಬರ್ 2020, 14:31 IST
ಮದ್ದೂರಿನಲ್ಲಿ ನಡೆದ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಭಾಗವಹಿಸಿದ್ದ ಬಿಜೆಪಿಯ ನಾಯಕರು
ಮದ್ದೂರಿನಲ್ಲಿ ನಡೆದ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಭಾಗವಹಿಸಿದ್ದ ಬಿಜೆಪಿಯ ನಾಯಕರು   

ಮದ್ದೂರು: ‘ಗ್ರಾಮ ಪಂಚಾಯಿತಿ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಿದ್ದು, ಕಾರ್ಯಕರ್ತರು ಸ್ಥಳೀಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕಂದಾಯ ಸಚಿವ ಆರ್.ಅಶೋಕ್ ಕರೆ ನೀಡಿದರು.

ಪಟ್ಟಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಗ್ರಾಮ ಸ್ವರಾಜ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕಾರ್ಯಕರ್ತರು ಯಾವುದೇ ಚುನಾವಣೆಯಾಗಲಿ ಅದನ್ನು ಗಂಭೀರವಾಗಿ ತೆಗೆದುಕೊಂಡು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಆ ಮೂಲಕ ಪಕ್ಷದ ಬೆಳವಣಿಗೆ ಮುಂದಾಗಿ. ಮಂಡ್ಯ ಗೆದ್ದರೆ ಇಂಡಿಯಾ ಗೆದ್ದ ಹಾಗೆ. ಆದ್ದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 4 ರಿಂದ 5 ಗೆಲ್ಲಲು ಸ್ಥಾನ ಗೆಲುವು ಸಾಧಿಸಲು ತಯಾರಿ ನಡೆಸಬೇಕು’ ಎಂದರು.

ADVERTISEMENT

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ ‘ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಬರಬೇಕು’ ಎಂದರು.

ವಿವಿಧ ಪಕ್ಷಗಳ ಹಲವು ಮುಖಂಡರು ಎಸ್.ಪಿ.ಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

ಸಚಿವರಾದ ಎಸ್.ಟಿ. ಸೋಮಶೇಖರ್, ಕೆ.ಸಿ.ನಾರಾಯಣ ಗೌಡ, ಮುನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಮಾಜಿ ಸಚಿವ ಎ.ಮಂಜು, ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ರವಿಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.