
ಪ್ರಜಾವಾಣಿ ವಾರ್ತೆ
ಹಲಗೂರು: ಸಮೀಪದ ಹಾಡ್ಲಿ ಬಳಿ ಇರುವ 66/11 ಕೆ.ವಿ. ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆ.9 ರಂದು ಸೋಮವಾರ ಲಿಂಕ್‌ಲೈನ್ ಕಾಮಗಾರಿ ನಿರ್ವಹಣಾ ಕಾರ್ಯ ನಡೆಯಲಿದೆ.
ಈ ಕಾರಣದಿಂದ ಹಾಡ್ಲಿ, ಅಗಸನಪುರ, ಜೋಗಿಪುರ, ಮೇಗಳಾಪುರ, ಕಂಸಾಗರ, ಲಿಂಗಣಾಪುರ, ನಡಕಲಪುರ, ನಂಜೇಗೌಡನದೊಡ್ಡಿ, ಗ್ರಾಮದೇವತೆಪುರ, ಕೋಡಿಪುರ, ಹುಲ್ಲಹಳ್ಳಿ, ಹುಲ್ಲಾಗಾಲ, ಚೆನ್ನೀಪುರ, ಬಸವನಪುರ, ಡಿ.ಹಲಸಹಳ್ಳಿ, ಧನಗೂರು, ಕೂನನಪುರ ಸೇರಿ ವಿವಿಧ ಗ್ರಾಮಗಳಲ್ಲಿ ವಿವಿಧ ಗ್ರಾಮಗಳಲ್ಲಿ ಇಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್ ಮಳವಳ್ಳಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಎಸ್.ಪ್ರೇಮ್ ಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.