ADVERTISEMENT

ಹಲಗೂರು: 29 ಲೀಟರ್ ಅಕ್ರಮ ಮದ್ಯ ವಶ

​ಪ್ರಜಾವಾಣಿ ವಾರ್ತೆ
Published 5 ಮೇ 2025, 13:48 IST
Last Updated 5 ಮೇ 2025, 13:48 IST
<div class="paragraphs"><p>ಪೊಲೀಸ್</p></div>

ಪೊಲೀಸ್

   

(ಸಾಂದರ್ಭಿಕ ಚಿತ್ರ)

ಹಲಗೂರು: ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳ ಮೇಲೆ ಭಾನುವಾರ ದಾಳಿ ಮಾಡಿದ ಹಲಗೂರು ಪೊಲೀಸರು ₹15 ಸಾವಿರ ಮೌಲ್ಯದ 29 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ADVERTISEMENT

ಸಮೀಪದ ಮುತ್ತತ್ತಿಯಲ್ಲಿ ಮಾಹಿತಿ ಪಡೆದ ಹಲಗೂರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಲೋಕೇಶ ಮತ್ತು ಸಿಬ್ಬಂದಿ ರಾಜು ಎಂಬಾತನ ಅಂಗಡಿಯ ಮೇಲೆ ದಾಳಿ ಮಾಡಿ ₹7,845 ಮೌಲ್ಯದ 14 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಅದೇ ಗ್ರಾಮದ ರವಿ ಎಂಬಾತನ  ಮನೆಯಲ್ಲಿ ದಾಳಿ ಮಾಡಿದಾಗ ₹7,820 ಮೌಲ್ಯದ 15 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.

ಇಬ್ಬರು ಆರೋಪಿಗಳ ಮೇಲೆ ಪ್ರತ್ಯೇಕ ಪ್ರಕರಣ ದಾಖಲಿಸಿ, ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ಬಿಡುಗಡೆ ಮಾಡಲಾಯಿತು. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.