ಹಲಗೂರು: ಇಲ್ಲಿನ ಸಂತೇಮಾಳ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಆ.24 ರಂದು ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಹಲಗೂರು ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಗ್ರಾಮದ ಸಬೀರ್ ಪಾಷಾ ಬಂಧಿತ ಆರೋಪಿ. ಮೈಸೂರು ಕುವೆಂಪು ನಗರ ನಿವಾಸಿ ರಂಗಸ್ವಾಮಿ ಅವರ ಪುತ್ರ ರಮೇಶ್ ಚಿಂದಿ ಆಯ್ದುಕೊಂಡು ಹಲಗೂರಿನ ಶಾಲೆಯ ಹೊರಗೆ ಮಲಗುತ್ತಿದ್ದರು. ಅವರ ತಲೆಯ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಶನಿವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿತ್ತು.
ಹಲಗೂರು ಸರ್ಕಲ್ ಇನ್‌ಸ್ಪೆಕ್ಟರ್ ಬಿ.ಎಸ್.ಶ್ರೀಧರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು. ಅಪರಾಧ ತನಿಖಾ ತಂಡ ಕೊಲೆ ಆರೋಪಿಯನ್ನು ಬಂಧಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.