ADVERTISEMENT

ಹಲಗೂರು: ವಿವಿಧ ಕಡೆ ಜೂಜಾಟದಲ್ಲಿ ತೊಡಗಿದ್ದ 23 ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 5:28 IST
Last Updated 19 ಫೆಬ್ರುವರಿ 2026, 5:28 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಹಲಗೂರು: ವಿವಿಧ ಕಡೆ ಜೂಜಾಟದಲ್ಲಿ ತೊಡಗಿದ್ದ 23 ಮಂದಿ ಜೂಜುಕೋರರನ್ನು ಬಂಧಿಸಿದ ಹಲಗೂರು ಪೊಲೀಸರು ₹32 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಹಲಗೂರು ಸಮೀಪದ ಎನ್.ಹಲಸಹಳ್ಳಿ ಗ್ರಾಮದ ಮಾರಮ್ಮನ ದೇವಾಲಯದ ಬಳಿ 7 ಮಂದಿಯನ್ನು ಬಂಧಿಸಿದ್ದು, ₹4 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ಮುತ್ತತ್ತಿಯಲ್ಲಿ ಆಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ 16 ಮಂದಿ ಜೂಜುಕೋರರನ್ನು ಬಂಧಿಸಿದ್ದು, ಆರೋಪಿಗಳಿಂದ ₹28 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಮಂಗಳವಾರ ತಡರಾತ್ರಿ ಖಚಿತ ಮಾಹಿತಿ ಅಧರಿಸಿದ ಹಲಗೂರು ಪೊಲೀಸರು ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಎಸ್.ಶ್ರೀಧರ್ ಮಾರ್ಗದರ್ಶನದಲ್ಲಿ ಪಿಎಸ್ಐ ಲೋಕೇಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಜೂಜುಕೋರರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.