ADVERTISEMENT

ಹಲಗೂರು | ಕಾರು ಡಿಕ್ಕಿ: ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 6:15 IST
Last Updated 28 ಜನವರಿ 2026, 6:15 IST
ವರ್ಷಿತ್
ವರ್ಷಿತ್   

ಹಲಗೂರು: ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದೇವಿರಹಳ್ಳಿ ಗೇಟ್ ಬಳಿ ಮಂಗಳವಾರ ಸಂಜೆ ನಡೆದಿದೆ.

ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ನಾಗಮ್ಮ ಅವರ ಪುತ್ರ ವರ್ಷಿತ್ (15) ಮೃತಪಟ್ಟ ವಿದ್ಯಾರ್ಥಿ. ಸಮರ್ಥ್ ಮತ್ತು ದೀಕ್ಷಿತ್ ಗಾಯಗೊಂಡಿದ್ದಾರೆ.

ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಶಾಲೆಯ ಬಸ್‌ನಿಂದ ಇಳಿದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಳವಳ್ಳಿ ಕಡೆಯಿಂದ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ADVERTISEMENT

ಗಾಯಗೊಂಡ ವಿದ್ಯಾರ್ಥಿಗಳನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.