ADVERTISEMENT

ಹಾರಂಗಿ, ಕಬಿನಿ, ಹೇಮಾವತಿಗೂ ಡಿಸ್ನಿಲ್ಯಾಂಡ್‌ ರೂಪ

ಕೆಆರ್‌ಎಸ್ ಡಿಸ್ನಿಲ್ಯಾಂಡ್‌ ಯೋಜನೆಗೆ ₹ 1,060 ಕೋಟಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2018, 18:59 IST
Last Updated 23 ನವೆಂಬರ್ 2018, 18:59 IST

ಮಂಡ್ಯ: ಕೆಆರ್‌ಎಸ್‌ ಮಾತ್ರವಲ್ಲದೆ ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳನ್ನೂ ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಇಲ್ಲಿ ಹೇಳಿದರು.

‘ಎರಡು ಹಂತದ ಕಾಮಗಾರಿಯಲ್ಲಿ ನಾಲ್ಕೂ ಜಲಾಶಯಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಖಾಸಗಿ– ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ. ಮೊದಲ ಹಂತದಲ್ಲಿ ಕೆಆರ್‌ಎಸ್‌ ಅಭಿವೃದ್ಧಿಗೆ ₹ 1,060 ಕೋಟಿ ವೆಚ್ಚ ಮಾಡಲಾಗುವುದು.ಎರಡನೇ ಹಂತದಲ್ಲಿ ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳ ಕಾಮಗಾರಿ ಆರಂಭಿಸಲಾಗುವುದು’ ಎಂದರು. ಮೊದಲ ಹಂತದ ಕಾಮಗಾರಿ 2020ಕ್ಕೆ, ಎರಡನೇ ಹಂತದ ಕೆಲಸ 2022ಕ್ಕೆ ಪೂರ್ಣಗೊಳ್ಳಲಿದೆ.

ಖಾಸಗಿಯವರು 25 ವರ್ಷ ನಿರ್ವಹಣೆ ಮಾಡಿ ನಂತರ ಸರ್ಕಾರಕ್ಕೆ ಬಿಟ್ಟುಕೊಡಲಿದ್ದಾರೆ. ಈ ಯೋಜನೆ ಜಾರಿಯಾದರೆ 50 ಸಾವಿರ ಯುವಜನರಿಗೆ ಉದ್ಯೋಗ ದೊರೆಯಲಿದ್ದು, ವರ್ಷಕ್ಕೆ ₹ 300-400 ಕೋಟಿ ವಹಿವಾಟು ನಡೆಯುತ್ತದೆ’ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.