ಕೆ.ಆರ್.ಪೇಟೆ: ತಾಲ್ಲೂಕಿನ ಹೊಸಹೊಳಲು ಗ್ರಾಮದ ಹರಿಕಥೆ ವಿದ್ವಾನ್ ಹಾಗೂ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ಎಚ್.ವೈ. ವಿಠ್ಠಲ್ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ರಾಮಾಯಣ, ಮಹಾಭಾರತ ಸೇರಿದಂತೆ ದೇವರ ಗೀತೆಗಳನ್ನು ಸುಶ್ರಾವ್ಯವಾಗಿ ಪ್ರಸ್ತುತಪಡಿಸುತಿದ್ದರು.
ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.