ಮಂಡ್ಯ: ಹಿಂದೂ ಮುಸ್ಲಿಂ ನಡುವೆ ಸೌಹಾರ್ದತೆ ಸಾಮರಸ್ಯ ಬೆಳೆಸಲು ಪ್ರಗತಿಪರ ಸಂಘಟನೆಗಳು ಸೆ.22 ರಂದು ಬೆಳಿಗ್ಗೆ 10.30 ಗಂಟೆಗೆ ‘ಸಾಮರಸ್ಯ ನಡಿಗೆ’ ಹಮ್ಮಿಕೊಂಡಿವೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಎಂ.ಸಿ.ಬಸವರಾಜು ಹೇಳಿದರು.
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಉಂಟಾದ ಗಲಭೆಯ ಹಿನ್ನಲೆಯಲ್ಲಿ ಸಾರ್ವಜನಿಕರ ನಡುವೆಯೂ ಸೌಹಾರ್ದತೆ ಬೆಳೆಯಬೇಕು. ಅಲ್ಲದೆ ಪರಸ್ಪರ ವಿಶ್ವಾಸದಿಂದ ಸಹಬಾಳ್ವೆ ನಡೆಸಲು ಅನುಕೂಲವಾಗುವಂತೆ ಈ ನಡಿಗೆ ಆಯೋಜಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.
ಮದ್ದೂರು ಪಟ್ಟಣದ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ಪ್ರತಿಮೆ ಬಳಿಯಿಂದ ಆರಂಭಗೊಳ್ಳುವ ನಡಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಐತಿಹಾಸಿಕ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಬಳಿ ಸಮಾವೇಶಗೊಳ್ಳಲಿದೆ. ಯಾವುದೇ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸುವವರನ್ನು ಕ್ರಿಮಿನಲ್‌ಗಳಂತೆಯೇ ನೋಡಬೇಕು. ಸಂವಿಧಾನ ನೀಡಿರುವ ಕಾನೂನಿನ ವ್ಯಾಪ್ತಿಯಲ್ಲಿ ಕ್ರಿಮಿನಲ್‌ಗಳಿಗೆ ಗರಿಷ್ಠ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ವಿವಿಧ ಸಂಘಟನೆಯ ಮುಖಂಡರಾದ ಟಿ.ಎಲ್.ಕೃಷ್ಣೇಗೌಡ, ಮರಳಿಗ ಶಿವರಾಜ್, ಶಂಕರೇಗೌಡ, ಜಗದೀಶ್, ರಾಮಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.