
ಸಂತೇಬಾಚಹಳ್ಳಿ: ಬೀಗರ ಊಟಕ್ಕೆ ಬಂದಿದ್ದ ಇಬ್ಬರು ಮಹಿಳೆಯರು ಅಪಘಾತದಲ್ಲಿ ಮೃತಪಟ್ಟ ಘಟನೆ ಬಿಲ್ಲೇನಹಳ್ಳಿ ಗವಿರಂಗನಾಥ ಸ್ವಾಮಿ ದೇವಾಲಯದ ಬಳಿ ನಡೆದಿದೆ.
ದೇವಾಲಯದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಬೀಗರ ಊಟಕ್ಕಾಗಿ ಸಾರಂಗಿ ಗ್ರಾಮದಿಂದ ಬಂದಿದ್ದ ಸರೋಜಮ್ಮ (65) ಹಾಗೂ ಶಾಂತಮ್ಮ (55) ಮೃತರು.
ಸಾರಂಗಿ ಮೂಲದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅಪಘಾತ ಪಡಿಸಿದ ವಾಹನ ಹಳ್ಳದಲ್ಲಿ ಬಿದ್ದಿದೆ.
ಸ್ಥಳದಲ್ಲಿ ಸಾವನಪ್ಪಿದ್ದ ಮಹಿಳೆಯರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರ ಮೃತದೇಹವನ್ನು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.