ADVERTISEMENT

ನಾಡಿನ ಅಭಿವೃದ್ಧಿಗೆ ಎಚ್.ಡಿ.ಕುಮಾರಸ್ವಾಮಿ ಕೊಡುಗೆ ಅಪಾರ: ಕೆ.ಅನ್ನದಾನಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2023, 12:53 IST
Last Updated 16 ಡಿಸೆಂಬರ್ 2023, 12:53 IST
<div class="paragraphs"><p>ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಜೆಡಿಎಸ್ ಮುಖಂಡ ಕೆ.ಅನ್ನದಾನಿ ನೇತೃತ್ವದಲ್ಲಿ ಹಣ್ಣುಹಂಪಲು ವಿತರಿಸಲಾಯಿತು.</p></div>

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಜೆಡಿಎಸ್ ಮುಖಂಡ ಕೆ.ಅನ್ನದಾನಿ ನೇತೃತ್ವದಲ್ಲಿ ಹಣ್ಣುಹಂಪಲು ವಿತರಿಸಲಾಯಿತು.

   

ಮಳವಳ್ಳಿ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಜೆಡಿಎಸ್ ಮುಖಂಡ ಕೆ.ಅನ್ನದಾನಿ ನೇತೃತ್ವದಲ್ಲಿ ಪಟ್ಟಣದ ಗಂಗಾಧರೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.


ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಜೆಡಿಎಸ್ ಮುಖಂಡ ಕೆ.ಅನ್ನದಾನಿ ಮಾತನಾಡಿ, ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿ ಜನರ ಮನಗೆದ್ದಿರುವ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಜನರ ಸೇವೆ ಮಾಡುವಂತಾಗಲಿ ಹಾಗೂ ಅವರಿಗೆ ಆಯಸ್ಸು, ಆರೋಗ್ಯ ಲಭಿಸಲಿ ಎಂದು ಆಶಿಸಿದರು.

ADVERTISEMENT


ಅನಂತ್ ರಾಂ ವೃತ್ತದ ಬಳಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿದರು. ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಂ.ವಿಶ್ವನಾಥ್, ಪುರಸಭೆ ಸದಸ್ಯರಾದ ಎಂ.ಟಿ.ಪ್ರಶಾಂತ್, ಸಿದ್ದರಾಜು, ನಾಗೇಶ್, ನಂದಕುಮಾರ್, ಮಣಿ, ಮುಖಂಡರಾದ ಹನುಮಂತು, ಎಂ.ಎಚ್.ಕೆಂಪಯ್ಯ, ಪುಟ್ಟಬುದ್ಧಿ, ಕೃಷ್ಣ, ಕಿಟ್ಟಿ, ಶಂಕರೇಗೌಡ, ಅಂಕರಾಜು, ಮಲ್ಲೇಶ್, ನಾಗರಾಜು, ಬೂವಳ್ಳಿ ಸದಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.