ADVERTISEMENT

ರಾಜ್ಯವೇ ನನ್ನ ಪರಿಮಿತಿ, ಜನ ಬಯಸುವ ಕಡೆ ಸ್ಪರ್ಧೆ: ಎಚ್‌.ಡಿ. ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 11:33 IST
Last Updated 23 ಜನವರಿ 2026, 11:33 IST
<div class="paragraphs"><p>ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಸಚಿವ</p></div>

ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಸಚಿವ

   

ಮಂಡ್ಯ: ‘ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ’ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಆ ಮೂಲಕ ಅವರು, ರಾಜ್ಯ ರಾಜಕಾರಣಕ್ಕೆ ಮರಳುವ ಸ್ಪಷ್ಟ ಸೂಚನೆ ನೀಡಿದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಿವಳ್ಳಿ ಗ್ರಾಮದಲ್ಲಿ ಶುಕ್ರವಾರ ಮಾರಮ್ಮ ದೇವಿ ದೇವಾಲಯ ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ರಾಜ್ಯ ರಾಜಕಾರಣಕ್ಕೆ ವಾಪಸ್‌ ಬರುತ್ತೀರಾ ಎನ್ನುವ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ADVERTISEMENT

‘ಮಂಡ್ಯದಿಂದ‌ ಲೋಕಸಭೆ ಚುನಾವಣೆಗೆ ನಿಲ್ಲುವ ಉದ್ದೇಶ ಇರಲಿಲ್ಲ. ಸಿ.ಎಸ್‌. ಪುಟ್ಟರಾಜು ಅವರನ್ನು ನಿಲ್ಲಿಸಬೇಕು ಎಂದುಕೊಂಡಿದ್ದೆ. ಅವತ್ತು ಅನಿವಾರ್ಯವಾಗಿ ನಾನು ಎಲೆಕ್ಷನ್‌ಗೆ ನಿಂತೆ. ಸಂಸದನಾಗ್ತೀನಿ, ಕೇಂದ್ರ ಮಂತ್ರಿ ಆಗ್ತೀನಿ ಎಂದು ನನಗೆ ಗೊತ್ತಿರಲಿಲ್ಲ. ನಮ್ಮ ಪಕ್ಷದಿಂದ ಬೇರೆ ಪಕ್ಷಕ್ಕೆ ಹೋದವರು ಜೆಡಿಎಸ್ ಕಥೆ ಮುಗಿಯಿತು ಎಂದರು. ಆದರೆ, ನಮ್ಮ ಪಕ್ಷ ಯಾವ ರೀತಿಯಲ್ಲಿ ಗಟ್ಟಿಯಾಗುತ್ತಿದೆ ಎನ್ನುವುದು ಅವರಿಗೆ ಗೊತ್ತಿಲ್ಲ’ ಎಂದರು. 

ಮೈತ್ರಿ ಬಗ್ಗೆ ಅಂತಿಮ ತೀರ್ಮಾನ

ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂಬ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ, ‘ಕಾಂಗ್ರೆಸ್ ಕೆಟ್ಟ ಆಡಳಿತವನ್ನು ಕಿತ್ತೊಗೆಯಲು ಜೆಡಿಎಸ್- ಬಿಜೆಪಿ ಒಟ್ಟಾಗಿ ಹೋರಾಟ ನಡೆಸುತ್ತವೆ. ಈ ಹಿನ್ನೆಲೆಯಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ನಾವು ಮೈತ್ರಿ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಿವಳ್ಳಿ ಗ್ರಾಮದಲ್ಲಿ ಶುಕ್ರವಾರ ಮಾರಮ್ಮ ದೇವಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.