ಮಳವಳ್ಳಿ: ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಸಂಬಂಧ ₹5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವೆಂಕಟೇಶ್ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ನವೀನ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಜಾಮೀನಿನ ಮೇಲೆ ನವೀನ್ ಹೊರ ಬಂದಿದ್ದರು. ನವೀನ್ ಮೇಲೆ ರೌಡಿ ಶೀಟರ್ ತೆಗೆಯುವುದಾಗಿ ಬೆದರಿಸಿದ ಹೆಡ್ ಕಾನ್‌ಸ್ಟೆಬಲ್ ವೆಂಕಟೇಶ್ ₹5 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ನವೀನ್ ಲೋಕಾಯುಕ್ತ ಪೋಲೀಸರಿಗೆ ದೂರು ಸಲ್ಲಿಸಿದ್ದರು.
ಗುರುವಾರ ರಾತ್ರಿ ಠಾಣೆಯ ಎದುರಿನ ಹೋಟೆಲ್‌ವೊಂದರ ಬಳಿ ವೆಂಕಟೇಶ್ ₹5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಹಾಗೂ ಡಿವೈಎಸ್‌ಪಿ ಸುನೀಲ್ ಕುಮಾರ್ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಬ್ಯಾಟರಾಯಗೌಡ, ಲೇಪಾಕ್ಷಿಮೂರ್ತಿ, ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವೆಂಕಟೇಶ್ ಅವರನ್ನು ಬಂಧಿಸಲಾಗಿದೆ. ಲೋಕಾಯುಕ್ತ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.