ಭಾರತೀನಗರ: ಸಮೀಪದ ಗುಡಿಗೆರೆ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.
ಶಿಬಿರದಲ್ಲಿ ಕೂಲಿಕಾರರಿಗೆ ಹಾಗೂ ಸಾರ್ವಜನಿಕರಿಗೆ ಬಿಪಿ, ಶುಗರ್, ಹಿಮೋಗ್ಲೋಬಿನ್ ತಪಾಸಣೆಯನ್ನು ಸನುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮಾಡಿದರು.
ಶಿಬಿರಕ್ಕೆ ಪಿಡಿಓ ಸುಧಾ ಅವರು ಚಾಲನೆ ನೀಡಿ ಮಾತನಾಡಿ, ಕೃಷಿ ಕೂಲಿಕಾರರಿಗೆ ಆರೋಗ್ಯ ಭದ್ರೆತೆ ಒದಗಿಸಬೇಕಾದ ಹೊಣೆ ಗ್ರಾಮ ಪಂಚಾಯಿತಿಯದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಕೂಲಿಕಾರ್ಮಿಕರಿಗೂ ಉಚಿತವಾಗಿ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ಸದಸ್ಯರುಗಳಾದ ಮಂಜುನಾಥ್, ವಿ.ವಿಜಯ, ಆರೋಗ್ಯ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.