ಶ್ರೀರಂಗಪಟ್ಟಣ: ಪಟ್ಟಣದ ರಂಗನಾಥ ಕಲ್ಯಾಣ ಮಂಟಪದಲ್ಲಿ, ಆದಿ ಆರೋಗ್ಯ ಆಸ್ಪತ್ರೆ ಮತ್ತು ಚಂದ್ರವನ ಆಶ್ರಮದ ಆಶ್ರಯದಲ್ಲಿ ಭಾನುವಾರ ನಡೆದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ 300ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ನಡೆಯಿತು.
ಆದಿ ಆರೋಗ್ಯ ಆಶ್ರಮ ಆಸ್ಪತ್ರೆ ಮತ್ತು ತ್ರಿನೇತ್ರ ಅಂತರರಾಷ್ಟ್ರೀಯ ಯೋಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಎನ್. ನಾಗೇಶ್ ಅವರ ನೇತೃತ್ವದಲ್ಲಿ ಮೂಳೆ ಮತ್ತು ಕೀಲು, ಸ್ತ್ರೀ ರೋಗ, ಮಧುಮೇಹ, ಮೂಲವ್ಯಾದಿ, ಥೈರಾಯ್ಡ್, ಚರ್ಮರೋಗ, ಮೂತ್ರಕೋಶ ಇತರ ಸಮಸ್ಯೆಗಳ ತಪಾಸಣೆ ನಡೆಸಲಾಯಿತು.
ಡಾ. ಮಧುಮತಿ, ಡಾ.ಲಕ್ಷ್ಮಿನಾರಾಯಣ ಶೆಣೈ, ಡಾ.ಕೃಷ್ಣ, ಡಾ.ಇರ್ಫಾನ್ ಲೇಪಾಕ್ಷಿ, ಡಾ.ಅನಿಲ್‌ಕುಮಾರ್, ಡಾ.ಸೃಜನ ತುಳಿಸಿರಾಮ ಅವರ ತಂಡ ಆರೋಗ್ಯ ತಪಾಸಣೆ ನಡೆಸಿತು. ಅಗತ್ಯ ಇರುವವರಿಗೆ ಉಚಿತವಾಗಿ ಔಷಧಗಳನ್ನು ವಿತರಿಸಲಾಯಿತು.
ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು. ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ತಹಶೀಲ್ದಾರ್ ಪರಶುರಾಮ ಸತ್ತಿಗೇರಿ, ಜ್ಯೋತಿಷಿ ವಿ. ಭಾನುಪ್ರಕಾಶ ಶರ್ಮಾ, ಪುರಸಭೆ ಸದಸ್ಯ ಕೃಷ್ಣಪ್ಪ, ರಂಗನಾಥಸ್ವಾಮಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೋಮಶೇಖರ್, ಪ್ರಧಾನ ಅರ್ಚಕ ವಿಜಯಸಾರಥಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.