ಮಂಡ್ಯ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳಿದ್ದರೆ ಅವುಗಳನ್ನು ಸಮರ್ಪಕವವಾಗಿ ಬಗೆಹರಿಸಲು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ 24X 7 ಸಹಾಯವಾಣಿ, ಕಂಟ್ರೋಲ್ ರೂಂ ರಚಿಸಲಾಗಿದೆ.
ಕುಡಿಯುವ ನೀರಿನ ಸಮಸ್ಯೆ ದೂರು ಇದ್ದಲ್ಲಿ ಸಹಾಯವಾಣಿ ಸಂಖ್ಯೆ; 08232-229624 ಕ್ಕೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಮರ್ಪಕ ಕುಡಿಯುವ ನೀರಿನ ಮೇಲ್ವಿಚಾರಣೆಗಾಗಿ ಪ್ರತಿ ತಾಲ್ಲೂಕಿಗೂ ಒಬ್ಬರಂತೆ ತಾಲೂಕು ಪಂಚಾಯಿತಿ ಇಒ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗಗಳ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳನ್ನು ನೇಮಕ ಮಾಡಲಾಗಿದೆ. ಸಾರ್ವಜನಿಕರು ಅವರಿಗೆ ಕರೆ ಮಾಡಿ ದೂರು ಹೇಳಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.