ADVERTISEMENT

ಮಂಡ್ಯ | ಹೇಮಾವತಿ ಬಲದಂಡೆ ನಾಲೆ ಒಡೆದು ನೀರು ಪೋಲು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 13:30 IST
Last Updated 8 ಅಕ್ಟೋಬರ್ 2025, 13:30 IST
   

ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕಸಬಾ ಹೋಬಳಿಯ ಸಾಧುಗೋನಹಳ್ಳಿ ಬಳಿಯ ಹೇಮಾವತಿ 52ರ ಬಲದಂಡೆ ನಾಲೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

‘ನೀರಾವರಿ ಇಲಾಖೆ ಅಧಿಕಾರಿಗಳು ಹೇಮಾವತಿ ಬಲದಂಡೆ ಕಾಲುವೆಯ ಸ್ಥಿತಿಗತಿ ಪರಿಶೀಲಿಸದೆ ನೀರು ಹರಿಸಿದ ಪರಿಣಾಮ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದುಹೋಗುತ್ತಿದೆ. ಪ್ರಸಕ್ತ ವರ್ಷ ಹೇಮಾವತಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಹರಿಸಿದ್ದರೂ ರೈತರಿಗೆ ಅನುಕೂಲವಾಗುತ್ತಿಲ್ಲ’ ಎಂದು ರೈತ ಮುಖಂಡ ಎಸ್.ಎಂ. ಲೋಕೇಶ್ ದೂರಿದರು.

‘ಸಮಸ್ಯೆ ಕುರಿತು ಹಲವು ಬಾರಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ರಮ ವಹಿಸಿಲ್ಲ. ಪರಿಣಾಮ ಕಾಲುವೆ ಒಡೆದು ಅಮೂಲ್ಯವಾದ ನೀರು ಮುಖ್ಯ ರಸ್ತೆ ಹಾಗೂ ಹಳ್ಳ ಕೊಳ್ಳದಲ್ಲಿ ಹರಿಯುತ್ತಿದೆ. ಇದರಿಂದಾಗಿ ಕಾಲುವೆ ಕೊನೆಯ ಭಾಗದ ರೈತರ ಅಚ್ಚುಕಟ್ಟುಗಳಿಗೆ ನೀರು ಹೋಗದೆ ರೈತರು ಕಂಗಲಾಗಿದ್ದಾರೆ. ಈ ಕೂಡಲೇ ಸಮಸ್ಯೆ ಬಗೆಹರಿಸಬೇಕು, ಇಲ್ಲದಿದ್ದರೆ ಹೇಮಾವತಿ ನೀರಾವರಿ ಇಲಾಖೆ ಕಚೇರಿ ಮುಂದೆ ಚಳವಳಿ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ರೈತರಾದ ಅಣ್ಣೇಗೌಡ, ಸುಂದ್ರೆಗೌಡ, ತಿಮ್ಮೆಗೌಡ, ಉತ್ತಮ ಪ್ರಿಯ, ನಟೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.