ಮದ್ದೂರು: ತಾಲ್ಲೂಕಿನ ಹೆಮ್ಮನಹಳ್ಳಿ ಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವು ಮಾ.20, 21ರಂದು ವಿಜೃಂಭಣೆಯಿಂದ ನಡೆಯಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ 20ರಂದು ಮಧ್ಯಾಹ್ನ 12ಕ್ಕೆ ಚೌಡೇಶ್ವರಿ ಅಮ್ಮನವರ ದೇಗುಲದ ಅಮೃತ ಮಣ್ಣಿನ ದ್ವಾರವನ್ನು ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ತೆರೆಯಲಿದ್ದು, ಕಳೆದ ವರ್ಷ ಅಮ್ಮನವರ ಗುಡಿಯಲ್ಲಿ ಹಚ್ಚಲಾಗಿದ್ದ ನಂದಾದೀಪದ ದರ್ಶನನೊಂದಿಗೆ ಅಮ್ಮನವರ ದರ್ಶನವು ಭಕ್ತರಿಗೆ ಸಿಗಲಿದೆ.
ಜಾತ್ರೆಯಲ್ಲಿ ದೂರದ ಊರುಗಳಿಂದ ಬರುವ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದು, ಸಂಜೆ 5ಕ್ಕೆ ಅಮ್ಮನವರ ಬಂಡಿ ಉತ್ಸವ ನಡೆಯಲಿದ್ದು, ರಾತ್ರಿ 12ಕ್ಕೆ ಅಮ್ಮನವರ ಕರಗ ಉತ್ಸವವು ಗ್ರಾಮದಲ್ಲಿ ನಡೆಯಲಿದೆ. ರಾತ್ರಿ 12.30ಕ್ಕೆ ಕೊಂಡಕ್ಕೆ ಅಗ್ನಿಸ್ಪರ್ಶ ಕಾರ್ಯ ನೆರವೇರಲಿದೆ.
21ರಂದು ಬೆಳಿಗ್ಗೆ 4ಕ್ಕೆ ಅಮ್ಮನವರ ಉತ್ಸವದೊಂದಿಗೆ ಕೊಂಡೋತ್ಸವ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮಹಾ ರಥೋತ್ಸವ ನಡೆಯಲಿದ್ದು, ರಾತ್ರಿ 12ಕ್ಕೆ ದೇವಿಯ ಗರ್ಭಗುಡಿಯ ದ್ವಾರವನ್ನು ಅಮೃತ ಮಣ್ಣಿನಿಂದ ಮುಚ್ಚುವ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಕೃಷ್ಣ, ಕಾರ್ಯದರ್ಶಿ ಜೈಶಂಕರ್, ಖಜಾಂಚಿ ರಾಜ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.