ADVERTISEMENT

ನರೇಂದ್ರಸ್ವಾಮಿಗೆ ಸಚಿವ ಸ್ಥಾನಕ್ಕಾಗಿ ಹರಕೆ ಹೊತ್ತ ಹೈಕೋರ್ಟ್ ಜಡ್ಜ್‌

​ಪ್ರಜಾವಾಣಿ ವಾರ್ತೆ
Published 7 ಜನವರಿ 2025, 23:08 IST
Last Updated 7 ಜನವರಿ 2025, 23:08 IST
<div class="paragraphs"><p>ಮಳವಳ್ಳಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸನ್ಮಾನಿಸಿದರು&nbsp;</p></div>

ಮಳವಳ್ಳಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸನ್ಮಾನಿಸಿದರು 

   

ಮಳವಳ್ಳಿ (ಮಂಡ್ಯ ಜಿಲ್ಲೆ): ‘ಪಟ್ಟಣದ ನ್ಯಾಯಾಲಯಕ್ಕೆ ಹೊಸ ಕಟ್ಟಡ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆಯುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿರುವ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ದೇವರಲ್ಲಿ ಹರಕೆ ಹೊರುವೆ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ವಕೀಲರ ಸಂಘ ಆಯೋಜಿಸಿದ್ದ ವಕೀಲರ ದಿನಾಚರಣೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ‘ಮಳವಳ್ಳಿಯಲ್ಲಿ ಹೊಸ ಕಟ್ಟಡ ನಿರ್ಮಿಸಲು ತೊಡಕಾಗಿದ್ದ ಜಾಗದ ಸಮಸ್ಯೆಯನ್ನು ಶಾಸಕರು ಬಗೆಹರಿಸಿದ್ದಾರೆ. ಈ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಅವರಿಗೆ ಸಚಿವ ಸ್ಥಾನ ಸಿಗಲೆಂದು ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ– ಪಾರ್ವತಿ ದೇವರಲ್ಲಿ ಹರಕೆ ಹೊರುವೆ, ಅವರು ಸಚಿವರಾದ ನಂತರ ನಾನೇ ಖುದ್ದು ದೇವಸ್ಥಾನಕ್ಕೆ ತೆರಳಿ ಹರಕೆ ತೀರಿಸುವೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.