
ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್.ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಒಟ್ಟು 34 ಪ್ರಕರಣಗಳು ವರದಿ ಆಗಿದ್ದು, 28 ಪ್ರಕರಣಗಳನ್ನು ಭೇದಿಸಲಾಗಿದೆ.
ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಗೃಹ ಸಚಿವರು, ‘ಈ ಹೆದ್ದಾರಿ ಸಾರ್ವಜನಿಕ ಬಳಕೆಗೆ ಮುಕ್ತಗೊಂಡ ಬಳಿಕ 2022ರಿಂದ 2025ರ ಅಂತ್ಯಕ್ಕೆ ಈ ಪ್ರಕರಣಗಳು ವರದಿಯಾಗಿವೆ. 56 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ: 19.27 ಲಕ್ಷ ಪ್ರಕರಣ ದಾಖಲು ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಒಟ್ಟು ₹19.27 ಲಕ್ಷ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. 2024ರಲ್ಲಿ 13,83,861 ಹಾಗೂ 2025ರಲ್ಲಿ 54,175 ಪ್ರಕರಣಗಳು ದಾಖಲಾಗಿವೆ. 2024ರಲ್ಲಿ 13,83,861 ಪ್ರಕರಣಗಳು ವರದಿಯಾಗಿದ್ದು ₹93,75,42,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ₹83880500 ಸಂಗ್ರಹಿಸಲಾಗಿದ್ದು ₹85,36,62,000 ಬಾಕಿ ಇದೆ. 2025ರಲ್ಲಿ 54,3,175 ಪ್ರಕರಣಗಳು ವರದಿಯಾಗಿದ್ದು ₹40,10,76,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ₹4,30,73,000 ಸಂಗ್ರಹಿಸಲಾಗಿದೆ. ₹35,80,03,500 ಬಾಕಿ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.