ಐತಿಹಾಸಿಕ ಶ್ರೀರಂಗಪಟ್ಟಣ ದಸರಾದ ಜಂಬೂ ಸವಾರಿ ಮೆರವಣಿಗೆಗೆ ಚಿತ್ರನಟ ಶಿವರಾಜ್‌ಕುಮಾರ್ ಅವರು ಕಿರಂಗೂರು ಬನ್ನಿಮಂಟಪದಲ್ಲಿ ಶುಕ್ರವಾರ ಚಾಲನೆ ನೀಡಿದರು
ಪ್ರಜಾವಾಣಿ ಚಿತ್ರ
‘ಮಹೇಂದ್ರ‘ ಆನೆಯ ಮೇಲೆ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿ
ಶ್ರೀರಂಗಪಟ್ಟಣ ದಸರಾದಲ್ಲಿ ಕಣ್ಮನ ಸೆಳೆಯುವ ಕಲಾ ವೈಭವ
ಪೂಜಾ ಕುಣಿತ, ವೀರಗಾಸೆ, ಮಹಿಳಾ ಕೋಲಾಟ, ಸೋಮನ ಕುಣಿತ, ಡೊಳ್ಳು ಕುಣಿತ, ನಂದಿಧ್ವಜ ಕುಣಿತ ಮುಂತಾದ ಕಲಾತಂಡಗಳ ಪ್ರದರ್ಶನ ಮೆರವಣಿಗೆಗೆ ರಂಗು ತಂದವು.
ದೊಣ್ಣೆ ವರಸೆ, ಕತ್ತಿವರಸೆ, ಚೆಂಡೆಮೇಳ, ಬೆಂಕಿ ಭರಾಟೆ ಪ್ರದರ್ಶನ ಪ್ರೇಕ್ಷಕರನ್ನು ಮೂಕವಿಸ್ಮಿತರನ್ನಾಗಿ ಮಾಡಿದವು.
ಕೊಂಬು ಕಹಳೆ, ನಗಾರಿ, ಡೊಳ್ಳು ವಾದ್ಯಗಳ ನಾದಕ್ಕೆ ಜನರು ಹೆಜ್ಜೆ ಹಾಕಿ ಸಂಭ್ರಮಿಸಿದರು.
ದೊಣ್ಣೆ ವರಸೆ, ಕತ್ತಿವರಸೆ, ಬೆಂಕಿ ಭರಾಟೆ ಪ್ರದರ್ಶನ ಪ್ರೇಕ್ಷಕರನ್ನು ಮೂಕವಿಸ್ಮಿತರನ್ನಾಗಿ ಮಾಡಿದವು.
ತಾಯಿ ಚಾಮುಂಡೇಶ್ವರಿಗೆ ಸಚಿವರಾದ ಎನ್.ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ ಹಾಗೂ ಮಾಜಿ ಶಾಸಕಿ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ ಅವರು ಪುಷ್ಪಾರ್ಚನೆ ಮಾಡಿದರು
ವಿವಿಧ ಜಿಲ್ಲೆಗಳಿಂದ ಬಂದಿದ್ದ ಜನರು ಜಂಬೂಸವಾರಿಯನ್ನು ಕಣ್ತುಂಬಿಕೊಂಡರು. ಕೆಲವು ವಿದೇಶಿಯರು ಕೂಡ ರಸ್ತೆ ಪಕ್ಕ ನಿಂತು ಅಂಬಾರಿಯಲ್ಲಿದ್ದ ಚಾಮುಂಡೇಶ್ವರಿ ದೇವಿಯನ್ನು ನೋಡಿ ಪುಳಕಿತರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.