ADVERTISEMENT

ಅಮ್ಯೂಸ್‌ಮೆಂಟ್‌ ಪಾರ್ಕ್‌ ವಿರೋಧಕ್ಕೆ ನನ್ನ ಬೆಂಬಲವಿದೆ: ಸುಮಲತಾ

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 15:18 IST
Last Updated 16 ಜೂನ್ 2025, 15:18 IST
ಸುಮಲತಾ ಅಂಬರೀಷ್
ಸುಮಲತಾ ಅಂಬರೀಷ್   

ಮಂಡ್ಯ: ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನು ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯೂ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್‌ ತಿಳಿಸಿದ್ದಾರೆ. 

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಕೆಆರ್‌ಎಸ್‌ ಎಂಬುದು ಒಂದು ಅಣೆಕಟ್ಟೆಯಲ್ಲ, ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ’ ಎಂದಿದ್ದಾರೆ. 

‘ನಮ್ಮ ಮಂಡ್ಯದ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಇಂತಹ ದುಂದು ವೆಚ್ಚಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಈ ಯೋಜನೆಯ ವಿರೋಧಕ್ಕೆ ನನ್ನ ಬೆಂಬಲ ಸೂಚಿಸುತ್ತಿದ್ದೇನೆ. ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ತಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಜಾರಿಗೆ ತರಲು ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ಕೊಡಲಾರೆವು’ ಎಂದು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.