ADVERTISEMENT

ಮದ್ದೂರು | ಅಕ್ರಮ ಗಣಿಗಾರಿಕೆ: 15 ಟನ್‌ ಮರಳು ವಶ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 9:42 IST
Last Updated 18 ಅಕ್ಟೋಬರ್ 2025, 9:42 IST
ಮದ್ದೂರು ತಾಲ್ಲೂಕಿನ ಅಜ್ಜಹಳ್ಳಿ ಗ್ರಾಮದ ಬಳಿಯ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಅಡ್ಡೆ ಮೇಲೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮರಳು ಹಾಗೂ ಕೊಪ್ಪರಿಗೆ ವಶಪಡಿಸಿಕೊಂಡಿದ್ದಾರೆ
ಮದ್ದೂರು ತಾಲ್ಲೂಕಿನ ಅಜ್ಜಹಳ್ಳಿ ಗ್ರಾಮದ ಬಳಿಯ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಅಡ್ಡೆ ಮೇಲೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮರಳು ಹಾಗೂ ಕೊಪ್ಪರಿಗೆ ವಶಪಡಿಸಿಕೊಂಡಿದ್ದಾರೆ   

ಮದ್ದೂರು: ತಾಲ್ಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಬಳಿ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿದ್ದ ಅಡ್ಡೆಯ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 15 ಟನ್ ಮರಳು ಮತ್ತು ಕೊಪ್ಪರಿಗೆಗಳನ್ನು ವಶಕ್ಕೆ ಪಡೆದಿದ್ದಾರೆ. 

‘ಈಗಾಗಲೇ ಇದೇ ವ್ಯಾಪ್ತಿಯಲ್ಲಿ ಇತ್ತೀಚೆಗೆ ಅಕ್ರಮ ಮರಳುಗಾರಿಕೆ ಸಂಬಂಧ 2 ಪ್ರಕರಣಗಳನ್ನು ದಾಖಲಿಸಿದ್ದರೂ ಅಕ್ರಮ ಮರಳು ಗಣಿಗಾರಿಕೆ ದಂಧೆ ಮುಂದುವರಿಯುತ್ತಿದ್ದು, ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಮದ್ದೂರು ನ್ಯಾಯಾಲಯದಲ್ಲಿ ದೂರು ದಾಖಲಿಸುತ್ತೇವೆ’ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಮಹೇಶ್ ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ ತಾಲ್ಲೂಕಿನ ಕೆ. ಕೋಡಿಹಳ್ಳಿ, ನಗರಕೆರೆ ಸೇರಿದಂತೆ ಹಲವೆಡೆಗಳಲ್ಲಿಯೂ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದ್ದು ಸ್ಥಳೀಯ ಪೊಲೀಸರು ಈ ಬಗ್ಗೆ ನೋಡಿಯೂ ಮೌನವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ADVERTISEMENT

ದಾಳಿ ವೇಳೆ ಗ್ರಾಮ ಆಡಳಿತಾಧಿಕಾರಿಯಾದ ಮಮತಾ ಸೇರಿದಂತೆ ಹಲವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.